ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜನರು ಭಾವೋದ್ರೇಕವಾಗಿ ನಾನು ಮುಖ್ಯಮಂತ್ರಿಯಾಬೇಕು ಎಂದು ಕೂಗಿದರೆ ನನ್ನ ವಿರುದ್ಧ ಒಳ ಸಂಚು ಶುರುವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೋರಾ ಹೋಬಳಿಯ ಚಿಕ್ಕಗುಂಡಗಲ್ಲು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆದ ಸುಮಾರು 5 ಕೋಟಿ ರೂಗಳ ವೆಚ್ಚದ 17 ಕಾಮಗಾರಿಗಳನ್ನು ಶಂಕುಸ್ಥಾಪನೆ ಶನಿವಾರ ನೆರವೇರಿಸಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದೇನೆ ಪ್ರತಿಯೋಬ್ಬ ಮತದಾರರ ಋಣ ತೀರುಸುವ ಕೆಲಸವನ್ನು ಸೇವೆಯನ್ನು ಪ್ರಮಾಣಿಕವಾಗಿ ಮಾಡುತ್ತೇನೆ ನಾನು ನಿಮ್ಮಸೇವಕ, ಯಾವಾಗಲೂ ನಾನು ನಿಮ್ಮ ಸೇವೆಗೆ ಸಿದ್ಧವಾಗಿರು ತೇನೆ ಎಂದರು. ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ಮುಖಂಡರುಗಳು ಹಾಜರಿದ್ದರು.
buy motilium 10mg for sale – order motilium generic cyclobenzaprine cheap